ಬೆಂಗಳೂರು: ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಪರ್ಯಾಯ ವ್ಯವಸ್ಥೆ ಇಲ್ಲದೇ ತೆರವುಗೊಳಿಸೋದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರುನಾಡು ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ ಅಬ್ಬರ: ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್!
ರಾಜ್ಯದ ವಿವಿಧ ಜಿಲ್ಲೆಯಿಂದ ಆಗಮಿಸಿದ ಸಾವಿರಕ್ಕೂ ಹೆಚ್ಚು ಜನ ಬೀದಿಬದಿ ವ್ಯಾಪಾರಿಗಳು ರಾಜ್ಯ ಸರ್ಕಾರದ ವಿರುಧ್ಧ ತಮ್ಮ ಆಕ್ರೋಶವನ್ನ ವ್ಯಕ್ತಪಡಿಸೋ ಮೂಲಕ ತಮ್ಮ ಹಕ್ಕೊತ್ತಾಯ ಮಾಡಿದ್ರು. ಮಳೆ, ಬಿಸಿಲು, ಛಳಿ, ಗಾಳಿ, ಧೂಳು ಎನ್ನದೇ ದಿನನಿತ್ಯ ಕೈಗೆಟುಕುವ ದರದಲ್ಲಿ ಅವಶ್ಯಕ ವಸ್ತುಗಳನ್ನು ಸಾರ್ವಜನಿಕರಿಗೆ ಸಿಗುವಂತೆ ಕಾರ್ಯನಿರ್ವಹಿಸುತ್ತಿದ್ದೇವೆ, 2014 ಸಾಲಿನಲ್ಲಿ ಬೀದಿ ಬದಿ ವ್ಯಾಪಾರಿಗಳ ರಕ್ಷಣೆಗಾಗಿ ಕಾನೂನು ಜಾರಿಗೆ ಬಂದಿದೆ.
ಆದರೆ ವ್ಯವಸ್ಥಿತವಾಗಿ ಅನುಷ್ಠಾನ ಗೊಂಡಿಲ್ಲ, ವ್ಯಾಪಾರ ವಲಯಗಳನ್ನು ಗುರುತಿಸಬೇಕು. ಪಟ್ಟಣ ವ್ಯಾಪಾರ ಸಮಿತಿಯಲ್ಲಿ ನಿರ್ಧಾರ ಕೈಗೊಂಡು ಸಮೀಕ್ಷೆ ನಡೆಯಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಪ್ರಮಾಣ ಪತ್ರ ಮತ್ತು ಗುರುತಿನ ಚೀಟಿ ನೀಡಬೇಕು. ಬೀದಿ ಬದಿ ವ್ಯಾಪಾರಿಗಳ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಿದ್ಯಾರ್ಥಿ ವೇತನವನ್ನು ಸರ್ಕಾರದಿಂದ ನೀಡಬೇಕು, ಬೀದಿ ಬದಿ ವ್ಯಾಪಾರಿಗಳಿಗೆ ವೀಮಾ ಯೋಜನೆಯನ್ನು ಉಚಿತವಾಗಿ ಸರ್ಕಾರದಿಂದ ನೀಡಬೇಕು. ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಬೀದಿಬದಿ ವ್ಯಾಪಾರಿಗಳಿಗೋಸ್ಕರ ಒಂದು ಕ್ಷೇತ್ರದಲ್ಲಿ ಕನಿಷ್ಠ ಎರಡು ಆಂಬುಲೆನ್ಸ್ ವ್ಯವಸ್ಥೆ ಯಾಗಬೇಕು, ರಾಜ್ಯದಲ್ಲಿ ಬೀದಿಬದಿ ವ್ಯಾಪಾರಿಗಳ ಮಕ್ಕಳಿಗೆ ಸರ್ಕಾರದಿಂದ ನೌಕರಿ ನೀಡಲು ಮೀಸಲಾತಿ ಹೊರಡಿಸಬೇಕೆಂದು ಆಗ್ರಹಿಸಿದ್ರು. ಕೂಡಲೇ ಸರ್ಕಾರ ನಮ್ಮ ಎಲ್ಲಾ ಮನವಿಗಳಿಗೂ ಸ್ಪಂದಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡ್ರು.