ವಿಜಯಪುರ: ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಿಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷಣಿವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.
ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಭಯೋತ್ಪಾದಕರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರವಾಸಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದ ಜಿಹಾದಿಗಳು ಅಮಾಯಕರನ್ನು ಹತ್ಯೆ ಮಾಡಿದ್ದಾರೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಈ ಜಿಹಾದಿ ಶಕ್ತಿಗಳ ಹೆಡೆಮುರಿಕಟ್ಟುವ ಕೆಲಸವನ್ನು ಕೇಂದ್ರ ಸರ್ಕಾರ ಕೂಡಲೇ ಮಾಡಬೇಕು ಭಯೋತ್ಪಾದಕರನ್ನು ಬೆನ್ನಟ್ಟಿ ಭಾರತೀಯ ಸೇನೆ ಗುಂಡಿಕ್ಕಿ ಕೊಲ್ಲಬೇಕು ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಬೇಕು. ಈ ದಾಳಿ ಹಿಂದೆ ಇರುವ ಪಾಕಿಸ್ತಾನದ ಭಯೋತ್ಪಾದನಾ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಲು ಕೇಂದ್ರ ಸರ್ಕಾರ ಕೂಡಲೇ ಆದೇಶ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಸವಸೈನ್ಯದ ತಾಲೂಕ ಅಧ್ಯಕ್ಷ ಸಂಜು ಬಿರಾದಾರ ಮುಖಂಡರಾದ ಶ್ರೀಕಾಂತ ಕೊಟ್ರಶೆಟ್ಟಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಗೊಳಸಂಗಿ, ಜಟ್ಟಿಂಗರಾಯ ಮಾಲಗಾರ ಸಂಗಮೇಶ ಜಾಲಗೇರಿ ಸಂತೋಷ ಚಿಂಚೊಳ್ಳಿ ಮುದಕಪ್ಪ ಪಟ್ಟಣಶೆಟ್ಟಿ ಮಂಜು ಜಾಲಗೇರಿ ಸುರೇಶ ಹೂಗಾರ ವೀರೇಶ ಗಬ್ಬೂರ ಬಾಪು ಬಾಗೇವಾಡಿ ನವೀನ ಬೇವನೂರ ಎಂ ಬಿ ತೋಟದ ಮಾಂತೇಶ ಹೆಬ್ಬಾಳ ರಾಮಣ್ಣ ಕಲ್ಲೂರ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು…