ಬೆಳಗಾವಿ : ಕೇಂದ್ರ ಸರ್ಕಾರದಿಂದ ತೈಲ ಬೆಲೆ, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿಯ ಯುವ ಕಾಂಗ್ರೆಸ್ ಜಿಲ್ಲಾ ಘಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಯಿಂದ ಚನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಸಿಲಿಂಡರ್ ಬೆಲೆ ಏರಿಕೆ ವಾಪಾಸ್ ಪಡೆಯುವಂತೆ ಆಗ್ರಹಿಸಿದರು.
ತಲೆ ಮೇಲೆ ಸಿಲಿಂಡರ್ ಹೊತ್ತು ಪ್ರತಿಭಟನೆಯಲ್ಲಿ ಭಾಗಿಯಾದ ಮಹಿಳೆಯರು, ಮೋದಿ ಹಠಾವೋ ದೇಶ ಬಚಾವೋ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.