ಕೋಲಾರ: ತಮಿಳಿನಿಂದ ಕನ್ನಡ ಹುಟ್ಟಿದ್ದು ಅಂತ ನಟ ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಕೋಲಾರದಲ್ಲಿ ಕಮಲ್ ಹಾಸನ್ ವಿರುದ್ಧ ಕರವೇ ಪ್ರತಿಭಟನೆ ನಡೆಸಿದೆ. ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕರವೇ ಪ್ರತಿಭಟನೆ ನಡೆಸಿದ್ದು, ಕಮಲ ಹಾಸನ್ ಫೋಟೋ ತುಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಬಳಿಕ ಬ್ಯಾನರ್ ಗೆ ಬೆಂಕಿ ಹಚ್ಚಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಮುದಿಯ ಕಮಲ್ ಹಾಸನ್ ಕನ್ನಡಿಗರಿಗೆ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದು, ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.