ಕೋಲಾರ: ಜನೌಷದಿ ಕೇಂದ್ರ ಆಸ್ಪತ್ರೆ ಗಳಲ್ಲಿ ಮುಚ್ಚಲು ರಾಜ್ಯ ಸರ್ಕಾರ ನಿರ್ಧಾರ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ದ ಕೋಲಾರ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ,ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಬಿಜೆಪಿ ಜಿಲ್ಲಾದ್ಯಕ್ಷ ಓಂಶಕ್ತಿ ಚಲಪತಿ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಕೈಗೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜನೌಷದಿ ಕೇದ್ರಗಳನ್ನು ಸರ್ಕಾರಿ ಆಸ್ಪತ್ರೆಯ ಬಳಿಯಿಂದ ತೆರವು ಗೊಳಿಸದಂತೆ ಎಚ್ಚರಿಕೆ ನೀಡಿದ್ದಾರೆ.