ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ಧಾವಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಮಾರ್ಟಿನ್ ಮುಂದೆಯೇ ಮುಸ್ಲಿಂ ಯುವಕರು ಪ್ರತಿಭಟಿಸಿದ್ದಾರೆ.
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಎಂಬ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ.
ಈ ಮಸೀದಿಯಲ್ಲಿ ಎಂದಿನಂತೆ ಸೋಮವಾರ ಪ್ರಾರ್ಥನೆ ಮಾಡಲು ಮುಸಲ್ಮಾನರು ಆಗಮಿಸಿದ ವೇಳೆ ಕುರಾನ್, ಹದೀಸ್ ನಾಪತ್ತೆಯಾಗಿರುವುದನ್ನು ಗಮನಿಸಿದ್ದಾರೆ. ಹೀಗಾಗಿ ಪ್ರಾರ್ಥನೆ ಮುಗಿದ ಬಳಿಕ ಸುತ್ತಮುತ್ತ ಹುಡುಕಾಟ ನಡೆಸಿದಾಗ ಕುರಾನ್ ಮತ್ತು ಹದೀಸ್ ಸುಟ್ಟು ಹಾಕಿರುವುದು ಬೆಳಕಿಗೆ ಬಂದಿದೆ.
ಘಟನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಲ್ಲಡೆ ಸುದ್ದಿ ಹರಡುತ್ತಿದ್ದಂತೆ ಘಟನೆ ಖಂಡಿಸಿ ಬೆಳಗಾವಿ ನಗರದಲ್ಲಿ ಸಾವಿರಾರು ಮುಸ್ಲಿಂ ಮುಖಂಡರು, ಯುವಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.