ಪಾಟ್ನಾ:- ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಷ್ಟ್ರೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದರಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ವಿವಾದಕ್ಕೀಡಾಗಿದ್ದಾರೆ.
ಹೊಸ್ತಿಲ ಮೇಲೆ ಏಕೆ ಕೂಡ ಬಾರದು? ಖ್ಯಾತ ಜ್ಯೋತಿಷ್ಯರು ಹೇಳುವುದು ಹೀಗೆ!
ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ. ಆದರೆ, ಈ ಕಾರ್ಯಕ್ರಮವು ಭಾರೀ ವಿವಾದಕ್ಕೆ ಕಾರಣವಾಗಿದೆ.
ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, ಬಿಹಾರದಲ್ಲಿ 5 ಲಕ್ಷಕ್ಕೂ ಅಧಿಕ ಮಹಿಳೆಯರಿಗೆ ಈ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ. ಈ ಯೋಜನೆಯು ಋತುಸ್ರಾವದ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ ಎಂದು ಪಕ್ಷವು ಹೇಳಿಕೊಂಡಿದೆ.
ಬಿಹಾರ ಕಾಂಗ್ರೆಸ್ನ ಅಧ್ಯಕ್ಷ ರಾಜೇಶ್ ಕುಮಾರ್ ಅವರು ಶುಕ್ರವಾರ ಪಾಟ್ನಾದ ಸದಾಕತ್ ಆಶ್ರಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದರು. ಈ ಕಾರ್ಯಕ್ರಮವನ್ನು ಮಹಿಳಾ ಕಾಂಗ್ರೆಸ್ನ ಮೂಲಕ ಜಾರಿಗೆ ತರಲಾಗುವುದು ಎಂದು ತಿಳಿಸಿದರು
ಸ್ಯಾನಿಟರಿ ಪ್ಯಾಡ್ಗಳ ಪ್ಯಾಕೆಟ್ಗಳ ಮೇಲೆ ರಾಹುಲ್ ಗಾಂಧಿ ಅವರ ಚಿತ್ರದ ಜೊತೆಗೆ, ಕಾಂಗ್ರೆಸ್ನ ಚುನಾವಣಾ ಭರವಸೆಯಾದ `ಮಾಯಿ ಬೆಹನ್ ಮಾನ್ ಯೋಜನಾ’ ಅಡಿಯಲ್ಲಿ ಅಗತ್ಯವಿರುವ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ಆರ್ಥಿಕ ನೆರವು ನೀಡುವ ಘೋಷಣೆಯೂ ಇದೆ. ಈ ಯೋಜನೆಯನ್ನು ಅಕ್ಷಯ್ ಕುಮಾರ್ ಅಭಿನಯದ `ಪ್ಯಾಡ್ಮ್ಯಾನ್’ ಚಿತ್ರದಿಂದ ಸ್ಫೂರ್ತಿಗೊಂಡಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.