ರಾಯಚೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಲ್ಲೇ ಗರ್ಭೀಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಬಳಿ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹೊಂಬಳಕಲ್ ಗ್ರಾಮದ ಶಾಂಭವಿ ಎಂಬುವರು ಬಸ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ದಂಪತಿಗಳು ಕಾರವಾರಕ್ಕೆ ಕೂಲಿ ಕೆಲಸಕ್ಕಾಗಿ ಗುಳೆ ಹೋಗಿದ್ದರು. ಕಾರವಾರದಿಂದ ಗ್ರಾಮಕ್ಕೆ ವಾಪಸ್ ಹಿಂತಿರುಗುತ್ತಿದ್ದಾಗ ಬಸ್ನಲ್ಲೇ ಶಾಂಭವಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ಮೇರಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ.
ಹೆರಿಗೆ ಬಳಿಕ ಅಂಬ್ಯುಲೆನ್ಸ್ ಮೂಲಕ ಬಾಣಂತಿಯನ್ನು ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಕೆಕೆಆರ್ಟಿಸಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯನ್ನು ಪ್ರಯಾಣಿಕರು ಶ್ಲಾಘಿಸಿದ್ದಾರೆ.