ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ನಾಳೆ ಭರ್ಜರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಮಳೆ ಚುರುಕುಗೊಳ್ಳಲಿದ್ದು 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ನಿಮ್ಮ ಮನೆಯಲ್ಲೂ ಇಲಿಗಳ ಕಾಟ ಹೆಚ್ಚಾಗಿದ್ಯಾ? ಹಾಗಿದ್ರೆ ಹೀಗೆ ಮಾಡಿ ಓಡ್ಸಿ!
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದರೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.