ಮಂಗಳೂರು:- ದಕ್ಷಿಣ ಕನ್ನಡದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಿದ ಕೋರ್ಟ್!
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ತಡರಾತ್ರಿ ಸುರಿದ ಮಳೆ ಆರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ನಿರಂತರ ಮಳೆಗೆ ಜಲ ಪ್ರವಾಹ ಉಂಟಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಗುಡ್ಡ ಕುಸಿದಿದೆ. ಉಳ್ಳಾಲ, ಕಲ್ಲಾಪು, ಬಿಗಂಬಿಲ, ಪಿಲಾರ್, ತಲಪಾಡಿ, ಅಂಬಿಕಾರಸ್ತೆ, ಕೋಟೆಕಾರು, ಪಾವೂರು, ಹರೇಕಳದ ಜನರು ಹೈರಾಣಾಗಿದ್ದಾರೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.