ಬೆಂಗಳೂರು:– ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಾರ್ಮಿಕರ ದಿನಾಚರಣೆ ಪ್ರಯುಕ್ತ ಚಂದಾಪುರ ಸರ್ಕಲ್ ನಲ್ಲಿ ಜರುಗಿದ ಮೇ ಡೇ ರ್ಯಾಲಿ!
ಮೇ 4ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.