ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
IPL 2025: ಕ್ಯಾಪ್ ನಮ್ದೆ, ಟೇಬಲ್ ಟಾಪ್ ನಮ್ದೆ..ಹೇಗಿತ್ತು ಕೊಹ್ಲಿ ಫೋಸ್!?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ
ಇನ್ನೂ ರಾಜ್ಯದಲ್ಲಿ ಏಪ್ರಿಲ್ ತಿಂಗಳ ಬಿಸಿಲಿನ ತಾಪಮಾನಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ವಿಪರೀತ ತಾಪಮಾನ ತಗ್ಗಿಸಲು ರಾಜ್ಯದ ಕೆಲವು ಕಡೆ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದೆ. ಈ ಮಳೆ ಇನ್ನೂ ನಾಲ್ಕೈದು ದಿನ ಕೆಲ ಜಿಲ್ಲೆಯಲ್ಲಿ ಅರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ