ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆ ಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ.
ತಪ್ಪಿದ ಚಾಲಕನ ನಿಯಂತ್ರಣ: ಹೊಂಡಕ್ಕೆ ಹಾರಿದ KSRTC ಬಸ್; ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ!
ಬಿಸಿಲ ತಾಪ ಕಡಿಮೆಯಾಗಿದೆ. ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.