ಬೆಂಗಳೂರು:-ಕರ್ನಾಟಕದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉತ್ತರ ಕರ್ನಾಟಕ ಮಂದಿಗೆ ಕೇಂದ್ರದಿಂದ ಗುಡ್ ನ್ಯೂಸ್: ಶೀಘ್ರವೇ ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರ!
ಕರ್ನಾಟಕದಲ್ಲಿ ಮೇ 4ರ ವರೆಗೆ ಮಳೆ ಮುಂದುವರಿಯಲಿದೆ. ಗರಿಷ್ಠ ತಾಪಮಾನದಲ್ಲಿ ಮಹತ್ವದ ಬದಲಾವಣೆಗಳು ಇಲ್ಲ ಎಂದು ಹೇಳಲಾಗಿದೆ. ಆದರೆ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ 2 ದಿನದ ಅವಧಿಯಲ್ಲಿ ಗರಿಷ್ಠ ತಾಪಮಾನವು 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಇನ್ನು ಗರಿಷ್ಠ ತಾಪಮಾನದಲ್ಲಿ ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ವರೆಗೆ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ರಾಜ್ಯದ ವಿವಿಧ ಭಾಗದಲ್ಲಿ ಇಂದು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ ಬರೋಬ್ಬರಿ 50-60 ಕಿ.ಮೀ ವೇಗದಲ್ಲಿ ಇರಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ದಕ್ಷಿಣ ಕರ್ನಾಟಕ ಹಾಗೂ ಮಲೆನಾಡಿನಲ್ಲೂ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಿಂಚು – ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.