ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬಾಗಲಕೋಟೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಲಿದೆ.
ಬೀದರ್ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.