ವಿಜಯಪುರ: ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಿದ್ದು, ಸಂಚಾರ ಅಸ್ತವ್ಯಸ್ತವಾಗಿತ್ತು. ಜಿಲ್ಲೆಯಾದ್ಯಂತ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ.
ಕೋಲಾರ: ಗಂಡನ ಮನೆಯಲ್ಲಿ ಮದ್ವೆಯಾಗಿ ಒಂದೇ ವರ್ಷಕ್ಕೆ ನೇಣಿಗೆ ಕೊರಳೊಡ್ಡಿದ ಗೃಹಿಣಿ!
ಭಾರೀ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇನ್ನೂ ನಿಲ್ಲಿಸಿದ್ದ ಬೈಕ್ ಹಾಗೂ ಕಾರುಗಳು ಮುಳುಗುವಷ್ಟು ನೀರು ನಿಂತಿದ್ದು, ಅಂಗಡಿ ಮುಂಗಟ್ಟುಗಳ ಜಲಾವೃತಗೊಂಡಿದೆ. ಏಕಾಏಕಿ ಸುರಿದ ಮಳೆಗೆ ಜನರು ಕಕ್ಕಾಬಿಕ್ಕಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಜಿಲ್ಲೆಯಲ್ಲಿ ಸುರಿದ ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಬಸವನಬಾಗೇವಾಡಿ ತಾಲೂಕಿನ ಕರಭಂಟನಾಳ ಗ್ರಾಮದಲ್ಲಿ ಬಸವರಾಜ ಸದಾಶಿವ ಮಣ್ಣೂರ ಎಂಬುವವರಿಗೆ ಸೇರಿದ ಎಮ್ಮೆಯೊಂದು ಸಿಡಿಲು ಬಡಿದು ಸಾವನ್ನಪ್ಪಿದೆ.