ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಭಾರೀ ಮಳೆ ಆಗಲಿದ್ದು, ಒಂಭತ್ತು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.
ನಿತ್ಯ ಬೆಳಿಗ್ಗೆ ಎದ್ದ ಕೂಡಲೇ ಎರಡೇ ಎರಡು ‘ನೆನೆಸಿಟ್ಟ ಬಾದಾಮಿ’ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬಳ್ಳಾರಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಚ್ಎಎಲ್ನಲ್ಲಿ31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.