ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಂಕುಳಿನ ಕಪ್ಪು ಕಲೆ ಬೆಳ್ಳಗಾಗಬೇಕಾ!? ಹಾಗಿದ್ರೆ ಶಾಂಪೂಗೆ ಈ ಪದಾರ್ಥ ಮಿಕ್ಸ್ ಮಾಡಿ ಹಚ್ಚಿ!
ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನು ಬೀದರ್,ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ