ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಹೈದರಾಬಾದ್ ಪ್ಲೇ ಆಫ್ ಕನಸು ಭಗ್ನ: ಮಳೆಯಿಂದ ಡೆಲ್ಲಿ ವಿರುದ್ಧದ ಪಂದ್ಯ ರದ್ದು! ಲೀಗ್ ಹಂತದಲ್ಲೇ SRH ಔಟ್!
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ಧಾರವಾಡದಲ್ಲಿ ಒಣಹವೆ ಇರಲಿದೆ. ಸೋಮವಾರ ಪೊನ್ನಂಪೇಟೆಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.