ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.
ಡೊಳ್ಳು ಹೊಟ್ಟೆ ಕರಗಿಸಲು ಇಲ್ಲಿದೆ ಮದ್ದು: ಹೀಗೆ ಮಾಡಿದ್ರೆ ರಿಸಲ್ಟ್ ಗ್ಯಾರಂಟಿ!
ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ ತಿಂಗಳಿನಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿತ್ತು. ಇದರಿಂದಾಗಿ ಬಿಸಿಗಾಳಿ ಬೀಸಿತ್ತು. ಆದರೆ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಇಂತಹ ಬಿಸಿಗಾಳಿಯ ಅನುಭವವಾಗಿತ್ತು.
ಆದರೆ ಬೇರೆ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ರಿಂದ 38 ಡಿಗ್ರಿ ಸೆಲ್ಸಿಯಸ್ ಅಸುಪಾಸಿನಲ್ಲಿತ್ತು. ಆದರೆ ಏಪ್ರಿಲ್ನಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರಿಂದಾಗಿ ರಾಜ್ಯದ ಶೇ 90ರಷ್ಟು ಪ್ರದೇಶದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಾದರೆ ಬಿಸಿಗಾಳಿ ಬೀಸಲಿದೆ.
ಈ ತಿಂಗಳಿನಲ್ಲಿ ಕಲಬುರಗಿ, ರಾಯಚೂರು, ವಿಜಯಪುರ, ಬೀದರ್, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಆದರೆ ಏಪ್ರಿಲ್ನಲ್ಲಿ ಈ ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ.
ಅಲ್ಲದೇ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಹಾಸನ ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಪ್ರದೇಶಗಳಲ್ಲಿ 34 ರಿಂದ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಮತ್ತು ಕರಾವಳಿ ಭಾಗದಲ್ಲಿ 33 ರಿಂದ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.