ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ರಣಭೀಕರ ಮಳೆ ಆಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಅವಾಂತರ: ಕರ್ನಾಟಕದ ಹಲವೆಡೆ ಅವಾಂತರ ಸೃಷ್ಟಿ; ಎಲ್ಲೆಲ್ಲಿ ಏನಾಯ್ತು? ಇಲ್ಲಿದೆ ಡೀಟೈಲ್ಸ್!
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿರುವ ಮುನ್ಸೂಚನೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಹಾಸನ, ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.