ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಅದರಂತೆ ಕರ್ನಾಟಕದ ಹಲವೆಡೆ ಇಂದಿನಿಂದ ಮಳೆಯ ಆರ್ಭಟ ಜೋರಾಗಿ ಇರಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ
ರೇವ್ ಪಾರ್ಟಿ ಮೇಲೆ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆಯಲ್ಲಿ ತೇಲಾಟ.. ಬಿಸಿ ಮುಟ್ಟಿಸಿದ ಖಾಕಿ!
ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ರೆಡ್ ಅಲರ್ಟ್ ಘೊಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.