ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭರ್ಜರಿ ಮಳೆ ಆಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.