ಬೆಂಗಳೂರು:- ಧಾರಾಕಾರ ಮಳೆಗೆ ಹುಬ್ಬಳ್ಳಿಯಲ್ಲಿ ಜನಜೀವನ ಅಸ್ತವ್ಯಸ್ತ ಆಗಿದೆ. ಗಣೇಶ್ ನಗರ, ಆನಂದನಗರದಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಮನೆಯೊಳಗೆ ನೀರು ನುಗ್ಗಿದ್ದರಿಂದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ಟಿವಿ, ಫ್ರಿಡ್ಜ್, ವಾಷಿಂಗ್ ಮಷಿನ್ ಎಲ್ಲವೂ ನೀರು ಪಾಲಾದವು.
ಇನ್ನೂ ಮತ್ತೊಂದೆಡೆ ಬೆಂಗಳೂರಿನಲ್ಲಿ ಹೆಚ್ಚು ಮಳೆ ಬಾರದಿದ್ದರೂ, ಸಣ್ಣ ಮಳೆಗೇ ಹೆಚ್ಚು ಅವಾಂತರಗಳಾಗುತ್ತಿವೆ. ಮಂಗಳವಾರ ಸಂಜೆ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ 36ಕ್ಕೂ ಹೆಚ್ಚು ಬೃಹತ್ ಮರಗಳು ನೆಲಕ್ಕುರುಳಿವೆ. ಬಿಬಿಎಂಪಿ 8 ವಲಯದಲ್ಲಿ 36ಕ್ಕೂ ಹೆಚ್ಚು ಮರಗಳು, 121 ಕೊಂಬೆಗಳು ಧರೆಗುರುಳಿರುವ ಮಾಹಿತಿ ಸಿಕ್ಕಿದೆ. ಇನ್ನು ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ವಲಯದಲ್ಲೇ ಹೆಚ್ಚು ಮರಗಳು ಉರುಳಿವೆ.
ಮೆಜೆಸ್ಟಿಕ್, ಶಾಂತಿನಗರ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಇಡೀ ನಗರವನ್ನೇ ಮಳೆರಾಯ ಆವರಿಸಿದ್ದ. ರಸ್ತೆಗಳೆಲ್ಲಾ ಜಲಾವೃತ ಆಗಿದ್ದವು. ಮಳೆ ಶುರುವಾಗುತ್ತಿದ್ದಂತೆಯೇ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಟ್ರಾಫಿಕ್ ಜಾಮ್ ಆಗಿತ್ತು. ಆ ಬಳಿಕ ನಿಧಾನವಾಗಿ ವಾಹನಗಳ ಓಡಾಟ ಸಾಗಿತ್ತು.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆ ಅವಾಂತರಗಳ ಸರಮಾಲೆಯನ್ನೇ ಸೃಷ್ಟಿಸಿದೆ