ಚಿಕ್ಕಮಗಳೂರು/ಉಡುಪಿ:– ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಮತ್ತು ಕೊಡಗು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಹುಬ್ಬಳ್ಳಿಯಲ್ಲಿ ಭಾರೀ ಮಳೆ: ಮನೆಗಳಿಗೆ ನುಗ್ಗಿದ ನೀರು.. ಜನಜೀವನ ಅಸ್ತವ್ಯಸ್ತ!
ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಗೆ ಇಂದು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಗೂ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಇಂದು ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಲಿದ್ದು, ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಕಡಲತೀರ, ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.