ಬೆಂಗಳೂರು: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಆಭರಣ ಅಂಗಡಿ ಮಾಲೀಕ ಸಾಹಿಲ್ ಜೈನ್ ಅವರನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದರು. ತನಿಖೆಯಲ್ಲಿ ಸಾಹಿಲ್ಗೆ ರನ್ಯಾ ರಾವ್ ಮತ್ತು ತರುಣ್ ರಾಜ್ ಜೊತೆ ಸಂಬಂಧವಿತ್ತು ಎಂದು ತಿಳಿದುಬಂದಿದ್ದು, ತನಿಖೆ ವೇಳೆ ಮತ್ತಷ್ಟು ಮಾಹಿತಿಗಳು ತಿಳಿದು ಬಂದಿದೆ.
ಹೌದು ಸಾಹಿಲ್ ವಾಟ್ಸ್ಆ್ಯಪ್ ಚಾಟ್ನಲ್ಲಿ ದುಬೈಗೆ ಹಣ ವರ್ಗಾವಣೆ ಮಾಡಿದ್ದನ್ನು ಡಿಆರ್ಐ ಪತ್ತೆಮಾಡಿದೆ. ಚಿನ್ನ ಮಾರಾಟ ಮಾಡಿದ್ದು ಕೂಡ ವಾಟ್ಸ್ಆ್ಯಪ್ ಚಾಟ್ನಿಂದ ಬಹಿರಂಗವಾಗಿದೆ. ಮಾರ್ಚ್ 3ರಂದು ರನ್ಯಾ ರಾವ್, ದುಬೈ ನಂಬರ್ನಿಂದ ಸಾಹಿಲ್ಗೆ ಕರೆ ಮಾಡಿದ್ದ ವೇಳೆ ಚಿನ್ನ ವಿಲೇವಾರಿ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದು ಪತ್ತೆಯಾಗಿದೆ.
Happy Ramadan Eid 2025: ರಂಜಾನ್ ಹಬ್ಬದ ಮಹತ್ವ, ಇತಿಹಾಸ ಆಚರಣೆಯ ವಿಧಾನ ಹೀಗಿದೆ ನೋಡಿ..!
ಮತ್ತೊಂದೆಡೆ, ಹವಾಲಾ ದಂಧೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾಗಿ ಜೈನ್ ತನಿಖಾಧಿಕಾರಿಗಳ ಬಳಿ ಹೇಳಿಕೆ ನೀಡಿದ್ದಾನೆ. ಇದರಿಂದಾಗಿ, ದುಬೈನಲ್ಲಿ ಚಿನ್ನ ಖರೀದಿಗೆ ಹವಾಲಾ ಮೂಲಕ ಹಣ ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ, ಡಿಆರ್ಐ ಅಧಿಕಾರಿಗಳು ಸಾಹಿಲ್ ಜೈನ್ ವಿಚಾರಣೆಯನ್ನು ಮುಂದುವರಿಸಿದ್ದಾರೆ.