ನವದೆಹಲಿ: ರನ್ಯಾ ರಾವ್ ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿದೆ.
ಹೆಣ್ಣು ಮಗಳು ಚಿನ್ನ ತರುವ ಮಾಹಿತಿ ಕೊಟ್ಟಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಪರಮೇಶ್ವರ್ ದಲಿತರ ಸಮಾವೇಶ ಮಾಡಲು ಹೊರಟರು. ತಾವೇ ಮುಂದಿನ ಸಿಎಂ ಆಗುತ್ತೇನೆ ಎಂದು ಸಮಾವೇಶಕ್ಕೆ ಮುಂದಾದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಭಾವಿ ನಾಯಕನೇ ಅವರನ್ನು ಸಿಲುಕಿಸಿದ್ದಾರೆ.
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ಇದೆಲ್ಲಾ ಸಿಎಂ ಸಿದ್ದರಾಮಯ್ಯಗೆ ಗೊತ್ತಿಲ್ಲವೇ? ಮುಂದೆ ಸಿಎಂ ಆಗಲು ಟವಲ್ ಹಾಸಿಕೊಂಡು ಇರುವವರೇ ಸಂದೇಶ ನೀಡಿದ್ದಾರೆ. ಈ ಪ್ರಕರಣ ಹೊರಬರಲು ಸಂದೇಶ ನೀಡಿದ್ದೇ ಕಾಂಗ್ರೆಸ್ ಪ್ರಭಾವಿ ನಾಯಕ. ಸಿಎಂ ಹತ್ತಿರ ಗುಪ್ತಚರ ಇಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಇದೆಲ್ಲಾ ಬಿಟ್ಟು ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕನಿಂದ ಇದೆಲ್ಲಾ ಆಗಿದೆ. ಅದೆನೋ ಎಷ್ಟು ಸಮಿತಿ ಮಾಡುತ್ತಿದ್ದೀರಲ್ಲವೇ, ಅದೆಲ್ಲಾ ಏನಾಯ್ತು. ಮಾತು ಎತ್ತಿದರೆ ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ. ನುಡಿದಂತೆ ನಡೆಯಲು ಎಷ್ಟು ಟ್ಯಾಕ್ಸ್ ಹಾಕಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.