ಕಲಬುರ್ಗಿ:- ಬಾಲಕಿ ಮೇಲಿನ ಹತ್ಯೆ ಹಾಗೂ ಕೊಲೆ ಕೇಸ್ ಗೆ ಸಂಬಂಧ ಎರಡು ವರ್ಷಗಳ ಬಳಿಕ ಆರೋಪಿಗೆ ಶಿಕ್ಷೆ ಪ್ರಕಟಿಸಲಾಗಿದ್ದು, ಗಲ್ಲು ಶಿಕ್ಷೆ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಸಲಾಗಿದೆ.
ನಿವೃತ್ತ ಡಿಜಿಪಿ ಕೊಲೆ ಪ್ರಕರಣ: ಆರೋಪಿತೆ ಪತ್ನಿ ಪಲ್ಲವಿಗೆ 14 ದಿನ ನ್ಯಾಯಾಂಗ ಬಂಧನ!
ಗುಂಡೇರಾವ ಚೋಪಡೆ (28) ಶಿಕ್ಷೆಗೆ ಒಳಗಾದ ಆರೋಪಿ. 2023ರ ಜು.15ರಂದು ಆಳಂದ ತಾಲ್ಲೂಕಿನ ಗ್ರಾಮವೊಂದರ ಬಾಲಕಿ ಪುಸ್ತಕವೊಂದನ್ನು ತರಲು ಮತ್ತೊಂದು ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಅಪರಾಧಿ ಗುಂಡೇರಾವ ಬಾಲಕಿಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಉಸಿರುಗಟ್ಟಿಸಿ ಸಾಯಿಸಿ, ಪಕ್ಕದ ಹೊಲದಲ್ಲಿದ್ದ ಬಾವಿಯೊಂದರಲ್ಲಿ ಶವವನ್ನು ಬೀಸಾಡಿ ಹೋಗಿದ್ದ. ಈ ಕುರಿತು ಆಳಂದ ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖಾಧಿಕಾರಿ ಭಾಸು ಚವ್ಹಾಣ ನೇತೃತ್ವದಲ್ಲಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಪೋಕ್ಸೊ ಕಾಯ್ದೆಯಡಿ ಆರೋಪಿಗೆ ಗಲ್ಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ, ಆದೇಶ ಹೊರಡಿಸಿದ್ದಾರೆ.