ರಾಯಚೂರು: ತೆಲುಗಿನ ಮಹೇಶ್ ಬಾಬು ನಿರ್ದೇಶನದಲ್ಲಿ #RAPO22 ಚಿತ್ರದಲ್ಲಿ ಅಭಿನಯಿಸುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ, ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಮೊರೆ ಹೋಗಿದ್ದಾರೆ.
ಮಂತ್ರಾಲಯಕ್ಕೆ ಪತ್ನಿ, ನಟಿ ತಾರಾ ಸೇರಿದಂತೆ ಕುಟುಂಬ ಸಮೇತರಾಗಿ ಆಗಮಿಸಿದ ಉಪೇಂದ್ರ, ಮೊದಲು ಮಂಚಾಲಮ್ಮ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ಬಳಿಕ ರಾಯರ ಮೂಲ ಬೃಂದಾವನದ ದರ್ಶನ ಪಡೆದು ಸುಬುಧೇಂದ್ರ ತೀರ್ಥರ ಆಶೀರ್ವಾದ ಪಡೆದರು.
ಸದ್ಯ ಭಾರ್ಗವ ಸಿನಿಮಾದಲ್ಲಿ ನಟಿಸುತ್ತಿರುವ ಅವರೀಗ ಮತ್ತೊಮ್ಮೆ ಟಾಲಿವುಡ್‌ನತ್ತ ಹೆಜ್ಜೆ ಇಟ್ಟಿದ್ದಾರೆ. ಉಪ್ಪಿ ಸನ್ ಆಫ್ ಸತ್ಯಮೂರ್ತಿ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಉಪೇಂದ್ರ, ಎನರ್ಜಿಟಿಕ್ ಸ್ಟಾರ್ ರಾಮ್ ಪೋತಿನೇನಿ ನಾಯಕನಾಗಿ ನಟಿಸುತ್ತಿರುವ #RAPO22 ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರ ಮಿಸ್ ಶೆಟ್ಟಿ ಮಿಸ್ಟರ್ ಪಾಲಿಶೆಟ್ಟಿ ನಿರ್ದೇಶಿಸಿದ್ದ ಮಹೇಶ್ ಬಾಬು ಪಿ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗುತ್ತಿದೆ. ಈ ಸಿನಿಮಾಗೆ ರಿಯಲ್ ಸ್ಟಾರ್ ಎಂಟ್ರಿ ಕೊಟ್ಟಿದ್ದಾರೆ.
Anushka Sharma: ಟೆಸ್ಟ್ ಕ್ರಿಕೆಟ್ʼಗೆ ಕೊಹ್ಲಿ ವಿದಾಯ: ಭಾವನಾತ್ಮಕ ಪತ್ರ ಬರೆದ ಅನುಷ್ಕಾ ಶರ್ಮಾ