ದೇವನಹಳ್ಳಿ:- ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೋಲಿಸರು ದಾಳಿ ಮಾಡಿರುವಂತಹ ಘಟನೆ ಜರುಗಿದೆ.
ನಿವೃತ್ತ ಡಿಜಿಐಜಿಪಿ ಓಂಪ್ರಕಾಶ್ ಕೊಲೆ ಪ್ರಕರಣ: ಸಿಸಿಬಿ ತನಿಖೆಯಲ್ಲಿ ಸ್ಪೋಟಕ ಕಾರಣಗಳು ರಿವಿಲ್!
ರೇವ್ ಪಾರ್ಟಿಯಲ್ಲಿ ನಿನ್ನೆ ರಾತ್ರಿಯಿಂದ ಸುಮಾರು 30ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದು, ಕುಡಿದ ಮತ್ತಿನಲ್ಲಿ ತೇಲಾಡಿದ್ದಾರೆ. ಇನ್ನು ದಾಳಿ ವೇಳೆ ಕೊಕೇನ್, ಹೈಡ್ರೋ ಡ್ರಗ್ಸ್ ಮತ್ತು ಗಾಂಜಾ ಪತ್ತೆ ಆಗಿದ್ದು, ವಶಕ್ಕೆ ಪಡೆಯಲಾಗಿದೆ.
ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 10 ಯುವತಿಯರು, 20 ಯುವಕರ ತಪಾಸಣೆ ಮಾಡಲಾಗಿದ್ದು, ಸದ್ಯ ವಶಕ್ಕೆ ಪಡೆಯಲಾಗಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದಲ್ಲಿ ಎಲ್ಲರನ್ನೂ ವಿಚಾರಣೆ ಮಾಡಲಾಗಿದೆ.