ಬೆಂಗಳೂರು: ಶಾಲಿನಿ ರಜನೀಶ್ ವಿರುದ್ಧ ಎಂಎಲ್‌ಸಿ ರವಿ ಕುಮಾರ್ ಅಸಂಸದೀಯ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪವಿದ್ದು, ಇದನ್ನೇ ಅಸ್ತ್ರವಾಗಿಟ್ಟುಕೊಂಡು ಕಾಂಗ್ರೆಸ್ ನಾಯಕರು ಬಿಜೆಪಿ ಎಂಎಲ್‌ಸಿ ವಿರುದ್ಧ ಬಾಣ ಬೀಸುತ್ತಲೇ ಇದ್ದಾರೆ. ಇನ್ನುಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,
ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..
ಈಗಾಗ್ಲೇ ಎಂಎಲ್ಸಿ ರವಿಕುಮಾರ್ ಅವರು ಅವರ ಹೇಳಿಕೆಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಸೋಸಿಯೇಷನ್ ನವರು ಸಿಎಂಗೆ ದೂರು ಕೊಟ್ಟಿದ್ದಾರೆ. ಆದರೆ ಖುದ್ದು ಸಿಎಂ ಅವರೇ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ನಡೆದುಕೊಂಡಾಗ ಆಗ ಎಲ್ಲಿ ಹೋಗಿದ್ವು ಈ ಅಸೋಸಿಯೇಷನ್ ಗಳು.? ಎಂದು ಪ್ರಶ್ನಿಸಿದ್ದಾರೆ. ಸಿಎಂ ವಿರುದ್ಧ ಯಾಕೆ ದೂರು ನೀಡಿರಲಿಲ್ಲ ಎಂದಿದ್ದಾರೆ.
ಇನ್ನೂ ಪಕ್ಷದ ವಿವಾರವಾಗಿ ಮಾತನಾಡಿದ ಅವರು, ಹಿರಿಯರು ನಮ್ಮ ಮಾರ್ಗದರ್ಶಕರಾಗಿರುವ ಪ್ರಲ್ಹಾದ್ ಜೋಷಿಯವರು ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ ಅದನ್ನು ಬಗೆಹರಿಸ್ತಾರೆ, ಮುಂದೆ ಎಲ್ಲವೂ ಸರಿ ಹೋಗಲಿದೆ ಎಂದಿದ್ದಾರೆ. ನಾನೂ ಕೂಡಾ ಹಿಂದಿನ ಸಭೆಯಲ್ಲಿ ಅವರಿಗೆ ಸಣ್ಣಪುಟ್ಟ ಗೊಂದಲ ಬಗೆಹರಿಸಲು ಮನವಿ ಮಾಡಿದ್ದೆ, ಅವರು ಜಿಲ್ಲೆಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದಿದ್ದಾರೆ.