ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರಿಂದ ಗೇಟ್-6 ರಲ್ಲಿ ಕಾಲ್ತುಳಿತ ಉಂಟಾಗಿ 10 ಮಂದಿ ಅಭಿಮಾನಿ ಮೃತಪಟ್ಟಿದ್ದಾನೆ. 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಮಾಹಿತಿ ಲಭ್ಯವಾಗಿದೆ.
ಆರ್‌ಸಿಬಿ ಆಟಗಾರರನ್ನು ನೋಡೋ ಆಸೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆಗಮಿಸಿದ್ದರು. ಈ ವೇಳೆ ನಿಯತ್ರಂಣ ತಪ್ಪಿದೆ. ನೂಕುನುಗ್ಗಲು ಉಂಟಾಗಿದೆ. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ, ಬರೋಬ್ಬರಿ 10 ಮಂದಿ ಮೃತಪಟ್ಟಿದ್ದಾರೆ. ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು,
ದೇಹಕ್ಕೆ ಒಳ್ಳೆಯದು ಅಂತ ಹೆಚ್ಚು ಖರ್ಜೂರ ತಿನ್ನೋ ಮುನ್ನ ಹುಷಾರ್! ಈ ಭಾಗಕ್ಕೆ ಹಾನಿಕಾರಕ!
ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ. 7 ಮಂದಿ ಬೌರಿಂಗ್ ಆಸ್ಪತ್ರೆಯಲ್ಲಿ ಹಾಗೂ 3 ಮಂದಿ ವೈದೇಹಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.