ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಕಾಲ್ತುಳಿತ ಸಂಭವಿಸಿ ಸುಮಾರು 11 ಮಂದಿ RCB ಅಭಿಮಾನಿಗಳು ಸಾವಿಗೀಡಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ X ಮಾಡಿರುವ ವಿಜಯ್ ಮಲ್ಯ, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ. ಐಪಿಎಲ್ ಚಾಂಪಿಯನ್ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.