ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ ಆಗಿದೆ. ಇನ್ನೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಇದೀಗ ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿದೆ.
ಬೆಂಗಳೂರಿನಲ್ಲಿ ಪ್ರಸಕ್ತ ಋತುವಿನ ಮೊದಲ ಐಪಿಎಲ್ ಪಂದ್ಯ ನಡೆದಂತಾಗಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ, ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.
ವಾಹನಗಳ ನಿಲುಗಡೆ ನಿಷೇಧ
- ಕ್ವೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
- ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ
- ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ
- ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ
- ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ
- ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ
- ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗ
- ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ
- ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ
- – ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ. 10.ಕಬ್ಬನ್ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ
- ಲ್ಯಾವೆಲ್ಲಿ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್ವರೆಗೆ
- 12.ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್ಕಾಟನ್ ಬಾಲಕೀಯರ ಶಾಲೆಯವರೆಗೆ
ಪಾರ್ಕಿಂಗ್
- ಪಂದ್ಯ ವೀಕ್ಷಣೆ ಮಾಡಲು ಬರೋರಿಗಡ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್
- ಜೊತೆಗೆ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ
- ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್
- ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನ