ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧ ಕೇಂದ್ರಗಳಿಗೆ ನಿರ್ಬಂಧ: ವಿಪಕ್ಷಗಳಿಂದ ತೀವ್ರ ಆಕ್ರೋಶ!
ಆರ್ಸಿಬಿ ಮತ್ತು ಹೈದರಾಬಾದ್ ನಡುವಿನ ಪಂದ್ಯ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕಾನಾ ಪಿಚ್ ಸಾಮಾನ್ಯವಾಗಿ ಸ್ಪಿನ್ ಬೌಲರ್ಗಳಿಗೆ ಹೆಚ್ಚು ನೆರವಾಗುತ್ತದೆ. ಆದರೆ, ಈ ಸೀಸನ್ನಲ್ಲಿ ಬ್ಯಾಟ್ಸ್ಮನ್ಗಳು ಹೆಚ್ಚು ಪ್ರಾಬಲ್ಯ ಸಾಧಿಸಿದ್ದಾರೆ. ಲಕ್ನೋ ಮತ್ತು ಹೈದರಾಬಾದ್ ನಡುವೆ ನಡೆದ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ 20 ಓವರ್ಗಳಲ್ಲಿ 205 ರನ್ಗಳನ್ನು ಗಳಿಸಿತು. ಇದರ ಹೊರತಾಗಿಯೂ, ಹೈದರಾಬಾದ್ ತಂಡವು 206 ರನ್ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟುವಲ್ಲಿ ಯಶಸ್ವಿಯಾಯಿತು. ಇದರರ್ಥ ಬೆಂಗಳೂರು-ಹೈದರಾಬಾದ್ ಪಂದ್ಯದಲ್ಲೂ ನಾವು ಬೌಂಡರಿ ಮತ್ತು ಸಿಕ್ಸರ್ಗಳ ಮಳೆಯನ್ನು ನಿರೀಕ್ಷಿಸಬಹುದು.
ಏಕಾನಾ ಕ್ರೀಡಾಂಗಣವು ಇಲ್ಲಿಯವರೆಗೆ ಒಟ್ಟು 20 ಐಪಿಎಲ್ ಪಂದ್ಯಗಳನ್ನು ಆಯೋಜಿಸಿದೆ. ಇದರಲ್ಲಿ 8 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆದ್ದಿದ್ದರೆ, ರನ್ ಬೆನ್ನಟ್ಟಿದ ತಂಡವು 11 ಪಂದ್ಯಗಳಲ್ಲಿ ಗೆದ್ದಿದೆ. ಅಂದರೆ ಏಕಾನಾದಲ್ಲಿ ಟಾಸ್ ಯಾವುದೇ ವಿಶೇಷ ಪಾತ್ರವನ್ನು ವಹಿಸುವುದಿಲ್ಲ.
ಪಂದ್ಯದ ಟಾಸ್ ಸಂಜೆ 7.00 ಗಂಟೆಗೆ ನಡೆಯಲಿದೆ. ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ. ಈ ಪಂದ್ಯದ ಸಮಯದಲ್ಲಿ ಲಕ್ನೋದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಆದರೆ ಮಳೆ ಬರುವ ಸಾಧ್ಯತೆ ಬಹುತೇಕ ನಗಣ್ಯ. ಲಕ್ನೋದಲ್ಲಿ ಇಂದು ತಾಪಮಾನ 36 ಡಿಗ್ರಿಯಿಂದ 30 ಡಿಗ್ರಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ.
ಎಲ್ಲಾದರು ಮಳೆಯಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ರದ್ದಾದರೆ ಅಥವಾ ಸೋತರೆ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ಆರ್ಸಿಬಿಯ ಆಸೆಗೆ ದೊಡ್ಡ ಹೊಡೆತ ಬೀಳಲಿದೆ.