ಬೆಂಗಳೂರು:- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್ ಪ್ರಶಸ್ತಿ ಗೆದ್ದು ಬೀಗಿದೆ. ತಂಡದ ಅದ್ಭುತ ಪ್ರದರ್ಶನದಿಂದ ಈ ಗೆಲುವು ಸಿಕ್ಕಿದೆ.18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್ಸಿಬಿಯ ವಿಕ್ಟರಿ ಪರೇಡ್ ನಡೆಯಲಿದೆ.
ಕಪ್ ಗೆಲ್ಲುತ್ತಿದ್ದಂತೆ ಆರ್ ಸಿಬಿ ಅಭಿಮಾನಿಗೆ ಚಾಕು ಇರಿತ: ಸಂಭ್ರಮಾಚರಣೆ ವೇಳೆ ದುಷ್ಕರ್ಮಿಗಳಿಂದ ಕ್ರೌರ್ಯ!?
ಅಧಿಕೃತವಾಗಿ ಆರ್ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್ಸಿಬಿ ತಿಳಿಸಿದೆ.
ಫೈನಲ್ ಪಂದ್ಯ ಗೆದ್ದ ಬಳಿಕ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್ ನಡೆಸಲಾಗುವುದು ಎಂದು ತಿಳಿಸಿದ್ದರು.