ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025ರ ಐಪಿಎಲ್ ನ ತನ್ನ 10ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಈ ರಾಶಿಯವರಿಗೆ ಗುರುಬಲ ಬಂದಿದೆ ಮದುವೆ ವಿಚಾರ ಮಾಡಿ: ಸೋಮವಾರದ ರಾಶಿ ಭವಿಷ್ಯ 28 ಏಪ್ರಿಲ್ 2025
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.
ಈ ಮೂಲಕ ಆರ್ ಸಿಬಿ ತನ್ನ ಅಂಕಗಳ ಗಳಿಕೆಯನ್ನು 14ಕ್ಕೆ ಏರಿಸಿಕೊಂಡಿದ್ದು ಮಾತ್ರವಲ್ಲದೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಲಿ ಟೂರ್ನಿಯಲ್ಲಿ ಆರ್ ಸಿಬಿ ಒಟ್ಟು 10 ಪಂದ್ಯಗಳ ಪೈಕಿ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿ 3 ಪಂದ್ಯಗಳಲ್ಲಿ ಸೋಲು ಕಂಡಿದೆ.
ಆ ಮೂಲಕ 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದೆ. ಅಂತೆಯೇ ಆರ್ ಸಿಬಿ ತನ್ನನೆಟ್ ರನ್ ರೇಟ್ ಅನ್ನೂ ಕೂಡ ಉತ್ತಮಗೊಳಿಸಿಕೊಂಡಿದ್ದು, ಆರ್ ಸಿಬಿ ನೆಟ್ ರನ್ ರೇಟ್ +0.521ಕ್ಕೆ ಏರಿಕೆಯಾಗಿದೆ.
ಉಳಿದಂತೆ ಈ ಪಟ್ಟಿಯಲ್ಲಿ 12 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟನ್ಸ್ 2ನೇ ಸ್ಥಾನದಲ್ಲಿದ್ದು, 8 ಪಂದ್ಯಗಳನ್ನಾಡಿರುವ ಗುಜರಾತ್ 6 ಜಯ ಮತ್ತು 2 ಸೋಲಿನೊಂದಿಗೆ 12 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿದಿದೆ.
ಅಂತೆಯೇ ಇಂದಿನ ಪಂದ್ಯದದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮಣಿಸಿ 2ನೇ ಸ್ಥಾನಕ್ಕೇರಿದ್ದ ಮುಂಬೈ ಇಂಡಿಯನ್ಸ್ ತಂಡ 3ನೇ ಸ್ಥಾನಕ್ಕೆ ಕುಸಿದಿದ್ದು, ಯ ಪಂದ್ಯ ಸೋತ ಡೆಲ್ಲಿ ಕ್ಯಾಪಿಟಲ್ಸ್ ತಂಡ 4ನೇ ಸ್ಥಾನಕ್ಕೆ ಕುಸಿದಿದೆ.