ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2025ರ ಐಪಿಎಲ್ ನ ತನ್ನ 10ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 163 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ ಜಯಭೇರಿ ಭಾರಿಸಿತು. ಆರ್ ಸಿಬಿ 18.3 ಓವರ್ ನಲ್ಲಿ 165 ರನ್ ಗಳಿಸಿ ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿತು.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಈ ಗೆಲುವಿನ ಬಳಿಕ ಮಾತನಾಡಿದ ಆರ್ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ತಂಡದ ಪ್ರದರ್ಶನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ಬೌಲರ್ಗಳು ತಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಿದ ರೀತಿ ನಿಜಕ್ಕೂ ಅದ್ಭುತವಾಗಿತ್ತು. ನಾನು ಮೊದಲೇ ಹೇಳಿದಂತೆ, ನಾವು ಮೈದಾನಗಳನ್ನು ನೋಡುವುದಿಲ್ಲ. ಬದಲಾಗಿ ಉತ್ತಮ ಕ್ರಿಕೆಟ್ ಆಡಲು ಬಯಸುತ್ತಿದ್ದೇವೆ.
ಚೇಸಿಂಗ್ ವಿಕೆಟ್, ಬೌಲಿಂಗ್ ಮತ್ತು ಸ್ಕೋರ್ ಬಗ್ಗೆ ಸಾಕಷ್ಟು ಸ್ಪಷ್ಟತೆ ಸಿಗುತ್ತದೆ. ಅದಕ್ಕೆ ಅನುಗುಣವಾಗಿ ನಾವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೂಡ ಗೆಲುವು ಸಾಧಿಸಿದ್ದೇವೆ ಎಂದರು.
ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೀಡಿದ ಗುರಿ ನೋಡಿದಾಗಲೇ, ಇದನ್ನು ಚೇಸ್ ಮಾಡಬಹುದೆಂದು ತಿಳಿದಿತ್ತು. ಏಕೆಂದರೆ ನನ್ನ ಬೌಲರ್ಗಳು ಎದುರಾಳಿ ಬ್ಯಾಟರ್ಗಳನ್ನು ಕಡಿಮೆ ಸ್ಕೋರ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಈ ಗೆಲುವಿನ ಶ್ರೇಯಸ್ಸು ಬೌಲರ್ಗಳಿಗೆ ಸಲ್ಲಬೇಕು ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.
ಆರ್ಸಿಬಿ ತಂಡದ ನಾಯಕನಾಗಿ ಯಶಸ್ಸು ಸಾಧಿಸುತ್ತಿರುವ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅತ್ಯುತ್ತಮ ಆಟಗಾರರಿದ್ದಾರೆ. ಅವರನ್ನು ಮುನ್ನಡೆಸಿದಾಗ ಅದ್ಭುತವೆನಿಸುತ್ತದೆ. ಇದು ನನ್ನ ಕಲಿಕೆಯ ಸಮಯ. ಇದರೊಂದಿಗೆ ಜಯವನ್ನು ಅಸ್ವಾದಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.