ಬೆಂಗಳೂರು:- ಬ್ಲಾಕ್ನಲ್ಲಿ RCB vs CSK ಪಂದ್ಯದ ಟಿಕೆಟ್ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚರಣ್ ರಾಜ್, ಹರ್ಷವರ್ಧನ ಸಕ್ಲೇಚ, ವಿನಯ್, ವೆಂಕಟಸಾಯಿ ಬಂಧಿತ ಆರೋಪಿಗಳು.
ಮಗು ಆದ್ಮೇಲೆ Hair Fall ಜಾಸ್ತಿ ಆಗಿದ್ಯಾ!? ಹಾಗಿದ್ರೆ ತಪ್ಪದೇ ಆಹಾರದಲ್ಲಿ ಈ ವಸ್ತು ಸೇರಿಸಿ!
ಪಂದ್ಯದ ಟಿಕೆಟ್ನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 32 ಟಿಕೆಟ್ಗಳು ಹಾಗೂ 1 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ.
ಪ್ರೇಕ್ಷಕರ ಅಗತ್ಯತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಿಂತು 1,200 ರೂ. ಬೆಲೆಯ ಟಿಕೆಟ್ ಅನ್ನು 10,000 ರೂ.ಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಸಿಸಿಬಿ ವಿಶೇಷ ತಂಡ ಟಿಕೆಟ್ ಖರೀದಿಸುವ ನೆಪದಲ್ಲಿ ಬಂದು ದಂಧೆಕೋರರನ್ನ ಬಂಧಿಸಿದ್ದಾರೆ