ನಾಳೆ ಅಂದ್ರೆ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಹೈವೋಲ್ಟೇಜ್ ಮ್ಯಾಚ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ಐಪಿಎಲ್ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಗೊಳಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆಟಗಾರರು ಹಾಗೂ ಅಭಿಮಾನಿಗಳ ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಐಪಿಎಲ್ ಉಳಿದ ಪಂದ್ಯಗಳಿಗೆ ಮತ್ತೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ದೇಹದ ಯಾವ ಭಾಗದ ಮೇಲೆ ಹಲ್ಲಿ ಬಿದ್ರೆ ಏನರ್ಥ!? ಜ್ಯೋತಿಷ್ಯ ಹೇಳುವುದು ಹೀಗೆ!
ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಈ ಹಿನ್ನೆಲೆ ಅವರವರ ದೇಶಗಳಿಗೆ ವಾಪಸ್ ತೆರಳಿದ್ದ ಆಟಗಾರರು ಮತ್ತೆ ತಮ್ಮ ಐಪಿಎಲ್ ತಂಡವನ್ನು ಸೇರ್ಪಡೆ ಆಗಿದ್ದಾರೆ. ಆದರೆ, ವೆಸ್ಟ್ ಇಂಡಿಸ್ ಹಾಗೂ ಇಂಗ್ಲೆಂಡ್ ತಂಡದ ಆಟಗಾರರು ಅವರ ದೇಶದಲ್ಲಿ ಪಂದ್ಯಗಳು ಇರುವುದರಿಂದ ಕೆಲವು ದಿನಗಳಷ್ಟೇ ಐಪಿಎಲ್ ಆಡಲಿದ್ದಾರೆ. ಕೊನೆಯಲ್ಲಿ ಅಲಭ್ಯರಾಗುವ ಸಾಧ್ಯತೆಯಿದೆ. ಆದರೆ, ಆಯ್ಕೆ ಆಗದವರು ಮಾತ್ರ ಐಪಿಎಲ್‌ನಲ್ಲಿ ಮುಂದುವರೆಯಲಿದ್ದಾರೆ
ಜೂನ್ 11ರಂದು ಇಂಗ್ಲೆಂಡ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಟೆಸ್ಟ್ ಆಡಲಿದೆ. ಈ ಹಿನ್ನೆಲೆ ಆಷ್ಟ್ರೇಲಿಯಾ ಆಟಗಾರ ಜೋಶ್ ಹೇಜಲ್‌ವುಡ್ ಆರ್‌ಸಿಬಿಯ ಮುಂದಿನ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಎನ್‌ಗಿಡಿ ಅಲಭ್ಯ ಯಾಕೆ?: ಮುಖ್ಯ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಎನ್‌ಗಿಡಿ ಕೂಡ ಸ್ಥಾನ ಪಡೆದಿದ್ದು, ಜೂನ್ 1ರ ಮೊದಲು ತಂಡವನ್ನು ಸೇರಬೇಕಾಗುತ್ತದೆ. ಜೂನ್ 3ರಂದು ಇಂಗ್ಲೆಂಡ್‌ನಲ್ಲಿ ಪ್ರಾರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಅವರು ಸಿದ್ಧತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಆರ್‌ಸಿಬಿ ಪ್ಲೇಆಫ್ ಪ್ರವೇಶಿಸಿದರೆ ಆಡುವವರ ಪಟ್ಟಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಲಿಯಾಮ್ ಲಿವಿಂಗ್‌ಸ್ಟೋನ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ಯಶ್ ದಯಾಲ್, ನುವಾನ್ ತುಸಾಹರಾ.
ಐಪಿಎಲ್ 2025 ಆರ್‌ಸಿಬಿ ತಂಡ: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಸಿಖ್ ದರ್ ಸಲಾಮ್, ಮನೋಜ್ ಭಾಂಡಗೆ, ನುವಾನ್ ತುಷಾರ, ಮೋಹಿತ್ ರಥಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್