ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಇಂದು RCB ಹಾಗೂ RR ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಸಾಧ್ಯತೆಯಿದೆ. ಏಕೆಂದರೆ ಕಳೆದ 5 ಪಂದ್ಯಗಳಲ್ಲಿ ಆರ್ಸಿಬಿ ಪರ ಕಣಕ್ಕಿಳಿದಿರುವ ಲಿಯಾಮ್ ಲಿವಿಂಗ್ಸ್ಟೋನ್ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ.
ಈವರೆಗೆ ಐದು ಪಂದ್ಯಗಳಲ್ಲಿ ಬ್ಯಾಟ್ ಬೀಸಿರುವ ಲಿಯಾಮ್ ಲಿವಿಂಗ್ಸ್ಟೋನ್ ಕೇವಲ 83 ರನ್ ಮಾತ್ರ ಕಲೆಹಾಕಿದ್ದಾರೆ. ಹಾಗೆಯೇ 8 ಓವರ್ಗಳನ್ನು ಎಸೆದಿರುವ ಅವರು ಪಡೆದಿರುವುದು ಕೇವಲ 2 ವಿಕೆಟ್ ಮಾತ್ರ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆಯಿದೆ. ಲಿಯಾಮ್ ಲಿವಿಂಗ್ಸ್ಟೋನ್ ಅವರನ್ನು ಕೈ ಬಿಟ್ಟರೆ ರೊಮೆರಿಯೊ ಶೆಫರ್ಡ್ ಅಥವಾ ಜೇಕಬ್ ಬೆಥೆಲ್ ಅವರನ್ನು ಕಣಕ್ಕಿಳಿಸಬಹುದು.
ಹೇಗಿರಲಿದೆ RCB ಪ್ಲೇಯಿಂಗ್ 11?
ಈ ಪಂದ್ಯದಲ್ಲೂ ಆರ್ಸಿಬಿ ತಂಡದ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಮುಂದುವರೆಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಕಣಕ್ಕಿಳಿಯಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ರಜತ್ ಪಾಟಿದಾರ್ ಬ್ಯಾಟ್ ಬೀಸಲಿದ್ದಾರೆ
ಐದನೇ ಕ್ರಮಾಂಕದಲ್ಲಿ ರೊಮೊರಿಯೊ ಶೆಫರ್ಡ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾಗೆ ಕಣಕ್ಕಿಳಿಯಲಿದ್ದಾರೆ. ಏಳು ಮತ್ತು ಎಂಟನೇ ಕ್ರಮಾಂಕಗಳಲ್ಲಿ ಟಿಮ್ ಡೇವಿಡ್ ಹಾಗೂ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್
ದೇವದತ್ ಪಡಿಕ್ಕಲ್
ರಜತ್ ಪಾಟಿದಾರ್
ರೊಮೊರಿಯೊ ಶೆಫರ್ಡ್
ಜಿತೇಶ್ ಶರ್ಮಾ (ವಿಕೆಟ್ ಕೀಪರ್)
ಟಿಮ್ ಡೇವಿಡ್
ಕೃನಾಲ್ ಪಾಂಡ್ಯ
ಭುವನೇಶ್ವರ್ ಕುಮಾರ್
ಜೋಶ್ ಹ್ಯಾಝಲ್ವುಡ್
ಯಶ್ ದಯಾಳ್