ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು ಪ್ಲೇ ಆಫ್ ಹತ್ತಿರದಲ್ಲಿ ನಿಂತಿದೆ. ಈ ವೇಳೆ ತಂಡಕ್ಕೆ ದೊಡ್ಡ ಪೆಟ್ಟೊಂದು ಬಿದ್ದಿದೆ. ತಂಡದ ಸ್ಟಾರ್ ಆಟಗಾರ ಗಾಯದ ಕಾರಣದಿಂದ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಔಟ್ ಆಗಿದ್ದಾರೆ. ಇವರಗೆ ಬದಲಿ ಆಟಗಾರನನ್ನು ಸಹ ಆರ್ಸಿಬಿ ಘೋಷಿಸಿದೆ. ಹಾಗಿದ್ರೆ ಆ ಬದಲಿ ಆಟಗಾರ ಯಾರು? ಯಾರು ಟೂರ್ನಿಯಿಂದ ಹೊರ ನಡೆದಿದ್ದಾರೆ ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ..
ಆಪರೇಷನ್ ಸಿಂಧೂರ್ ಯಶಸ್ವಿ: ಸೈನಿಕರಿಗಾಗಿ ನಿಮಿಷಾಂಭ ದೇಗುಲದಲ್ಲಿ ಪೂಜೆ ಸಲ್ಲಿಕೆ!
ಎಸ್, RCB ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಯಾಗಿ ಮತ್ತೊಬ್ಬ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಆರ್ಸಿಬಿ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದೆ.
ಪ್ಲೇ ಆಫ್ ಸನಿಹವಾಗುತ್ತಿರುವಾಗ ಆರ್ಸಿಬಿಗೆ ಆಟಗಾರರ ಇಂಜುರಿ ಸಮಸ್ಯೆ ಬೆಂಬಿಡದಂತೆ ಕಾಡುತ್ತಿದೆ. ಈ ಮೊದಲು ಆರಂಭಿಕ ಆಟಗಾರ ಫಿಲ್ ಸಾಲ್ಟ್ ಜ್ವರದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ. ಪ್ರಮುಖ ವೇಗಿ ಜೋಶ್ ಹೇಜಲ್ವುಡ್ ಕೂಡ ಗಾಯಕ್ಕೆ ತುತ್ತಾಗಿದ್ದು, ಅವರು ಕೂಡ ಕಳೆದ ಪಂದ್ಯದಲ್ಲಿ ಆಡಿರಲಿಲ್ಲ. ಇದರ ಜೊತೆಗೆ ನಾಯಕ ರಜತ್ ಪಾಟಿದರ್ ಕೂಡ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಇದರ ಜೊತೆಗೆ ಇದೀಗ ತಂಡದ ಪ್ರಮುಖ ಬ್ಯಾಟರ್ ದೇವದತ್ ಪಡಿಕ್ಕಲ್ ಇಂಜುರಿಯಿಂದಾಗಿ ಇಡೀ ಟೂರ್ನಿಯಿಂದ ಹೊರಬಿದ್ದಿರುವುದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಪಡಿಕ್ಕಲ್ ಮಂಡಿರಜ್ಜು ಗಾಯದಿಂದಾಗಿ ಬಳಲುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.