ಬೆಂಗಳೂರು: ಸಚಿವರಲ್ಲಿ ಜಾತಿ ಜಟಾಪಟಿ ಕಿಡಿಹಾರಿದೆ. ಲಿಂಗಾಯತ, ಒಕ್ಕಲಿಗರ ಪ್ರಬಲ ವಿರೋಧದ ನಡುವೆ ಸಿದ್ದರಾಮಯ್ಯ ಸರ್ಕಾರ ಕೈಗೊಳ್ಳುವ ನಿರ್ಧಾರದ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಇದರ ಬೆನ್ನಲ್ಲೇ ಜಾತಿ ಜನಗಣತಿ ವರದಿ ಜಾರಿಯಾದ್ರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ ಎಂದು ಎ. ಮಂಜು ಸವಾಲ್ ಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ಜಾತಿ ಜನಗಣತಿ ಮಾಡಲು ಅಧಿಕಾರ ಕೊಟ್ಟವರು ಯಾರು? ಜಾತಿ ಜನಗಣತಿ ಮಾಡಬೇಕಿದ್ದು ಕೇಂದ್ರ ಸರ್ಕಾರ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ. ಇಂತಹ ಸಮೀಕ್ಷೆಯಲ್ಲಿ ಜಾತಿಗಣತಿ ಯಾಕೆ ಮಾಡಿದ್ದು ಯಾಕೆ? ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಇರೋದಕ್ಕೆ ಇವೆಲ್ಲ ಮಾಡ್ತಿದ್ದಾರೆ.
ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?
ಕುರ್ಚಿ ಕಿತ್ತಾಟ ಮರೆ ಮಾಚೋಕೆ ಇದೆಲ್ಲ ಮಾಡ್ತಿದ್ದಾರೆ. ಇದು ಸರಿಯಲ್ಲ, ಈ ಜಾತಿ ಜನಗಣತಿ ವರದಿ ಅಂಗೀಕಾರ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಈ ಜಾತಿ ಜನಗಣತಿ ವಿರುದ್ಧ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಎಲ್ಲಾ ಒಕ್ಕಲಿಗ ಶಾಸಕರು ಪಕ್ಷಾತೀತವಾಗಿ ಧ್ವನಿ ಎತ್ತಬೇಕು. ನಮ್ಮ ಸಮುದಾಯಕ್ಕೆ ಅನ್ಯಾಯ ಆದ್ರೆ ನಾವು ಸಹಿಸಲ್ಲ. ನನಗೆ ಸಮುದಾಯದ ಮುಖ್ಯ, ಶಾಸಕ ಸ್ಥಾನ ಮುಖ್ಯ ಅಲ್ಲ. ಸಮುದಾಯಕ್ಕಾಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ಕೊಡೋಕೆ ಸಿದ್ಧ ಎಂದು ಹೇಳಿದ್ದಾರೆ.