ಹೌಸ್ ಅರೆಸ್ಟ್ ಶೋ ಬ್ಯಾನ್ ಮಾಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಸಭ್ಯತೆಯ ಗಡಿ ಮೀರಿದ ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಲೈಂಗಿಕ ಭಂಗಿಗಳ ಪ್ರದರ್ಶಿಸುವುದು, ಎಲ್ಲರ ಎದುರು ಬಟ್ಟೆ ಬಿಚ್ಚಿಸುವುದು, ಸೇರಿದಂತೆ ಅನೇಕ ಅಶ್ಲೀಲ ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಇದರ ವಿರುದ್ಧ ಹಲವು ಟೇಕೆಗಳು ವ್ಯಕ್ತವಾಗುತ್ತಿವೆ.
ಅಜಾಜ್ ಖಾನ್ ನಡೆಸಿಕೊಡುವ ʻಹೌಸ್ ಅರೆಸ್ಟ್ʼ ಅಶ್ಲೀಲ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಭಾರೀ ಟೇಕೆಗೆ ಕಾರಣವಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ಲೀಲತೆಯನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ವೀಕ್ಷಕರು ಆರೋಪಿಸಿ ವ್ಯಕ್ತಪಡಿಸಿದ್ದಾರೆ. ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ಸ್ಟ್ರೀಮಿಂಗ್ ಅಪ್ಲಿಕೇಶನ್ ಅನ್ನು ಸರ್ಕಾರ ಇನ್ನೂ ಏಕೆ ನಿಷೇಧಿಸಿಲ್ಲ ಎಂದು ಕೇಳಿದ್ದಾರೆ.
“ಉಲ್ಲು ಆಪ್ ಮತ್ತು ಆಲ್ಟ್ ಬಾಲಾಜಿಯಂತಹ ಆಪ್‌ಗಳು ಅಶ್ಲೀಲ ವಿಷಯದ ಆಪ್‌ಗಳ ಮೇಲಿನ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿಷೇಧದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ ಎಂದು ನಾನು ಸ್ಥಾಯಿ ಸಮಿತಿಯಲ್ಲಿ ಪ್ರಸ್ತಾಪಿಸಿದ್ದೇನೆ. ನಾನು ಇನ್ನೂ ಅವರ ಉತ್ತರಕ್ಕಾಗಿ ಕಾಯುತ್ತಿದ್ದೇನೆ” ಎಂದು ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.