ಬೆಂಗಳೂರು: ಐಪಿಎಲ್ನ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಆಗಿರುವ ಸಂಭ್ರಮಕ್ಕೆ ಸಾಕ್ಷಿಯಾಗಲು ರಾಜಧಾನಿಯ ದಶದಿಕ್ಕುಗಳಿಂದ ಯುವ ಅಭಿಮಾನಿಗಳು ಸಾಗರೋಪಾದಿಯಾಗಿ ಹರಿದು ಬಂದಿದ್ದರು.
ಅದಲ್ಲದೆ ಬೆಂಗಳೂರಿನ ನಮ್ಮ ಮೆಟ್ರೋ ದಾಖಲೆಯ ಪ್ರಯಾಣಿಕರ ಸಂಖ್ಯೆಯನ್ನು ದಾಖಲಿಸಿದೆ. ನಿನ್ನೆ ಒಂದೇ ದಿನ ಮೆಟ್ರೋದಲ್ಲಿ 9,66,732 ಜನರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ಹೊಸ ದಾಖಲೆ ಬರೆದಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ ಪ್ರಕಾರ, ಎಂದಿಗಿಂತ ನಿನ್ನೆ ಪ್ರಯಾಣಿಕರ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿತ್ತು.
ನಿತ್ಯ ಮೊಸರಿಗೆ ಈ ಪುಡಿ ಬೆರೆಸಿ ತಿಂದ್ರೆ ವಾರದಲ್ಲೇ ಕರಗುತ್ತೆ ಬೊಜ್ಜು! ನೀವು ಒಮ್ಮೆ ಟ್ರೈ ಮಾಡಿ!
ನೇರಳೆ ಮಾರ್ಗದಲ್ಲಿ 4,78,334 ಜನರು ಪ್ರಯಾಣ ಮಾಡಿದರೆ, ಮಾದಾವರ ಟು ಸಿಲ್ಕ್ ಇನ್ಸ್ಟಿಟ್ಯೂಟ್ (ಹಸಿರು ಮಾರ್ಗದಲ್ಲಿ) 2,84,674 ಜನರು ಪ್ರಯಾಣಿಸಿದ್ದಾರೆ. ಮೆಜೆಸ್ಟಿಕ್ ನಿಲ್ದಾಣದಿಂದಲೇ 2,03,724 ಜನರು ಪ್ರಯಾಣ ಮಾಡಿದ್ದಾರೆ.
ಒಟ್ಟಾರೆ ನಿನ್ನೇ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9,66,732 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಈ ಹಿಂದೆ 8.7 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುವ ಮೂಲಕ ನಮ್ಮ ಮೆಟ್ರೋ ದಾಖಲೆ ಬರೆದಿತ್ತು. ಇದೀಗ ಆ ದಾಖಲೆಯನ್ನು ಮೆಟ್ರೋ ಹಿಂದಿಕ್ಕಿದೆ.