ಬೆಂಗಳೂರು:- ಕನ್ನಡದ ಖ್ಯಾತ ಕವಿ ಎಚ್ ಎಸ್ ವೆಂಕಟೇಶಮೂರ್ತಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇದು ತುಂಬಲಾರದ ನಷ್ಟವಾಗಿದೆ. ಕನ್ನಡಕ್ಕೆ ಅನೇಕ ಕವಿತೆಗಳನ್ನು, ನಾಟಕಗಳನ್ನು , ಸಾಹಿತ್ಯಗಳನ್ನು ಕೊಡುಗೆ ನೀಡಿದ್ದಾರೆ
RCB ಈ ಬಾರಿ ಕಪ್ ಗೆದ್ರೆ ಈ ಕೆಲಸ ಮಾಡಿ: CM ಸಿದ್ದರಾಮಯ್ಯಗೆ ವಿಶೇಷ ಬೇಡಿಕೆ ಇಟ್ಟ ಬೆಂಗಳೂರು ಅಭಿಮಾನಿ!
ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ ಜನಪ್ರಿಯರಾಗಿರುವ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಪ್ರಮುಖ ಕವಿ, ನಾಟಕಕಾರ, ವಿಮರ್ಶಕ ಮತ್ತು ಪ್ರಾಧ್ಯಾಪಕರಾಗಿ ದುಡಿದಿದ್ದಾರೆ. ಅವರು 1944ರ ಜೂನ್ 23ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದಲ್ಲಿ ಜನಿಸಿದರು. ಎಚ್ಎಸ್ವಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಎಮ್.ಎ ಪದವಿ ಪಡೆದಿದ್ದಾರೆ.
ಡಾ ಹೆಚ್ ಎಸ್ ವೆಂಕಟೇಶ ಮೂರ್ತಿಯವರು ನವೋದಯ ಕಾಲದ ಬರಹಗಾರರು ಮತ್ತು ಭಾವಗೀತೆ ಕವಿಯಾಗಿದ್ದವರು. 2020 ರ ಹೊತ್ತಿಗೆ, ಅವರು ಕನ್ನಡದಲ್ಲಿ 100 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಅವರ “ಹೂವಿ” ನಾಟಕವನ್ನು ಭಾರತದಲ್ಲಿ ICSE ಶೈಕ್ಷಣಿಕ ಮಂಡಳಿಯು 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಮತ್ತು !0 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕವಾಗಿ ಗುರುತಿಸಿದೆ.