ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಅಂಡ್ ಗ್ಯಾಂಗ್ಗೆ ಖಾಕಿ ಶಾಕ್ ಕೊಟ್ಟಿದೆ. ಕಾಮಾಕ್ಷಿ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಚಾರ್ಜ್ ಶೀಟ್ ನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಕ್ಕೆ ಸಲ್ಲಿಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಕೆಲವು ದಾಖಲಾತಿ, ಆರೋಪಿಗಳ ವಿರುದ್ಧ ಇರುವ ಕೆಲವೊಂದು ಸಾಕ್ಷ್ಯ, ಕೃತ್ಯಕ್ಕೆ ಬಳಸಿದ ವಾಹನಗಳ ರಿಲೀಸ್ ಪ್ರಕ್ರಿಯೆ ದಾಖಲೆಗಳನ್ನು ಒಳಗೊಂಡ ದೋಷಾರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಹಾಗೂ ಪವಿತ್ರಾಗೌಡ ಜಾಮೀನು ಪಡೆದು ಹೊರಬಂದಿದ್ದರು. ನಟ ದರ್ಶನ್ ಜುಲೈ 11 ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದೀಗ ಡಿ ಅಂಡ್ ಗ್ಯಾಂಗ್ ವಿರುದ್ಧ ಖಾಕಿಗೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದೀಗ ದರ್ಶನ್ ಗೆ ಮತ್ತೆ ಢವಢವ ಶುರುವಾಗಿದೆ.