ಬೆಂಗಳೂರು – ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ನಾಳೆ ಸುಪ್ರೀಂನಲ್ಲಿ ನಡೆಯಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಪ್ರಕರಣದಲ್ಲಿ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಆರೋಪಿಗಳಿಗೆ ಮತ್ತೆ ಸಂಕಷ್ಟ ಎದುರಾಗುವಂತಿದೆ.
ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು. ಅದರಂತೆ ನಾಳೆ ನಡೆಯಲಿದೆ.