ಬೆಂಗಳೂರು:- ವಸತಿ ಯೋಜನೆಗಳಲ್ಲಿ ಮುಸ್ಲಿಂರಿಗೆ ಮೀಸಲಾತಿ ಹೆಚ್ಚಳ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಈ ಸಂಬಂಧ X ಮಾಡಿರುವ ಅವರು, ಯಾವುದರಲ್ಲೇ ಆಗಲಿ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂಬುದನ್ನು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ನಾವೀಗ ರಾಜ್ಯ ಸರ್ಕಾರದ ತುಷ್ಟೀಕರಣದ ಕ್ರಮ ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ಸರ್ಕಾರ ಈ ಹಿಂದೆ ರಾಹುಲ್ ಗಾಂಧಿ ಸೂಚನೆ ಮೇರೆಗೆ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸಿತು. ಈಗ ನೋಡಿದರೆ ವಸತಿ ಯೋಜನೆಗಳಲ್ಲಿ ಸಹ ಮುಸ್ಲಿಂ ಸಮುದಾಯಕ್ಕೆ ಶೇ.15ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರವಾದ ಕ್ರಮವೆಂದು ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದರು.
ಸೇನೆಯಲ್ಲಿ ಮುಸ್ಲಿಮರಿಗೆ ಧರ್ಮ ಆಧಾರಿತ ಮೀಸಲಾತಿಯನ್ನು ಪರಿಚಯಿಸಲು ಸಹ ಪ್ರಯತ್ನಿಸುತ್ತಿರುವುದು ನಿಜಕ್ಕೂ ಶೋಚನೀಯ. ಹಲವಾರು ಪ್ರಕರಣಗಳಲ್ಲಿ, ಸುಪ್ರೀಂ ಕೋರ್ಟ್ ಇಂತಹ ಅಸಂವಿಧಾನಿಕ ನಿರ್ಧಾರಗಳನ್ನು ರದ್ದುಗೊಳಿಸಿದೆ. ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರದ ಈ ನೀತಿ, ನಿಯಮಗಳನ್ನು ನಾವು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ. ವಸತಿ ಯೋಜನೆಯಲ್ಲಿ ಈ ಮೊದಲು ಮುಸ್ಲಿಂರಿಗೆ ಶೇ.10ರಷ್ಟ ಮೀಸಲಾತಿ ಇದ್ದುದೇ ಅಸಂವಿಧಾನಿಕವಾಗಿತ್ತು. ಈಗದನ್ನು ಮತ್ತೆ ಶೇ.15ಕ್ಕೆ ಹೆಚ್ಚಿಸಿರುವುದು ಸರಿಯಾದ ಕ್ರಮವಲ್ಲ. ಇದರಿಂದ ಉಳಿದೆಲ್ಲ ಸಮುದಾಯಗಳ ಕಡುಬಡವರಿಗೆ ತೀವ್ರ ಅನ್ಯಾಯವಾಗುತ್ತದೆ ಎಂದು ಅವರು ಆಕ್ಷೇಪಿಸಿದರು.