ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ವೈದ್ಯರ ನಿವೃತ್ತಿ ವಯಸ್ಸನ್ನು 60 ರಿಂದ 65ಕ್ಕೆ ಹೆಚ್ಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 1,500 ಕೋಟಿ ವೆಚ್ಚದ ಸರಗೂರಿನಿಂದ ಹೊಸಪುರಕ್ಕೆ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಅಂದಾಜು 90 ಕೋಟಿ ರೂ. ವೆಚ್ಚದ ಸತ್ತೇಗಾಲ ಕುಡಿವ ನೀರಿನ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇದರಿಂದ ರಾಮನಗರ, ಮಾಗಡಿ, ಕುಣಿಗಲ್ ತಾಲೂಕುಗಳಿಗೆ ಕುಡಿಯುವ ನೀರು ಪೂರೈಸಲಾಗುತ್ತದೆ ಎಂದರು.
ಚಾಣಕ್ಯನ ಪ್ರಕಾರ ಈ ಕೆಲಸ ಮಾಡಿದ್ರೆ ಸಾಕು ಜೀವನದ ಪ್ರತಿ ಹೆಜ್ಜೆಯಲ್ಲೂ ಸಿಗುತ್ತೆ ಸಂತೋಷ-ಯಶಸ್ಸು..!
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸಮೀಕ್ಷೆ ನಡೆಸುವಂತೆ ಸಚಿವರು ಅಭಿಪ್ರಾಯ ನೀಡಿದ್ದಾರೆ. ಮುಂದಿನ ವಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಂತರ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಶನಿವಾರ (ಮೇ.10) ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು, ಎಸ್ಪಿಗಳು, ಪೊಲೀಸ್ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು. ಮೇ 20ರಂದು ಆಯೋಜಿಸಿದ್ದ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.